ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು: ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಹೆಚ್.ಡಿಕೆ.

ಮಂಡ್ಯ,ಜೂನ್,4,2024 (www.justkannada.in):  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಅಧಿಕ ಲೀಡ್ ನಲ್ಲಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯದ ಜನತೆ ಮತ್ತು ಕಾರ್ಯಕರ್ತರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರ ಸಾಷ್ಟಾಂಗ ನಮನಗಳು.

ಈ ಗೆಲುವು ಸಕ್ಕರೆ ನಾಡಿನ ನನ್ನೆಲ್ಲಾ ತಂದೆ ತಾಯಂದಿರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ಹಾಗೂ ಜೆಡಿಎಸ್ – ಬಿಜೆಪಿ ಕಾರ್ಯಕರ್ತರು ಸೇರಿ ಸಮಸ್ತರಿಗೂ ಸಮರ್ಪಿತ.

@JanataDal_S, @BJP4Karnataka (NDA) ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನ್ನನ್ನು ಇಷ್ಟೊಂದು ಭಾರೀ ಅಂತರದಿಂದ ಗೆಲ್ಲಿಸಿದ ಎರಡೂ ಪಕ್ಷಗಳ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಈ ಯಶಸ್ಸು ಸಲ್ಲುತ್ತದೆ. ಸಂಘಟಿತ ಹೋರಾಟದಿಂದ ಈ ವಿಜಯ ಸಾಧ್ಯವಾಗಿದೆ ಎಂದು ವಿನಮ್ರವಾಗಿ ಹೇಳಬಯಸುತ್ತೇನೆ.

ಪ್ರತಿಯೊಬ್ಬರಿಗೂ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. ಮಂಡ್ಯ ಲೋಕಸಭೆ ಕ್ಷೇತ್ರದ ಸೇವೆಗೆ ನನ್ನ ಜೀವನ ಮುಡಿಪು ಎಂದಿದ್ದಾರೆ.

Key words: mandya, lokasabaha, election-JDS-HD kumaraswamy