ಮಂಡ್ಯ,ಏಪ್ರಿಲ್,1,2023(www.justkannada.in): ಈ ಬಾರಿ ಚುನಾವಣೆಯಲ್ಲಿ ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ, ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಇದೀಗ ಈ ಕುರಿತು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ಧರಾಮಯ್ಯ, ನಾನು ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದು ತಿಳಿಸಿದರು.
ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಯತೀಂದ್ರ ಸಿದ್ಧರಾಮಯ್ಯ, ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಅಂತಾ ಯಾರಿಗೆ ಆಸೆ ಇರಲ್ಲ ಹೇಳಿ. ಖಂಡಿತ ಸಿದ್ಧರಾಮಯ್ಯ ಸಿಎಂ ಆಗಬೇಕು ಅನ್ನೋದು ನನ್ನ ಆಸೆ. ಈ ಹಿಂದೆ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಉತ್ತಮ ಆಡಳಿತ ನೀಡಿದ್ದರು. ಮತ್ತೆ ಸಿಎಂ ಆದರೇ ರಾಜ್ಯವನ್ನ ಅಭಿವೃದ್ದಿ ಪಥದತ್ತ ಕೊಂಡೊಯ್ಯುತ್ತಾರೆ. ವರುಣಾ ಕ್ಷೇತ್ರ ಕಾಂಗ್ರೆಸ್ ಭದ್ರೋಟೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
Key words: mandya- MLA-Yathindra siddaramaiah-no contast-election