ಮಂಡ್ಯ, ಏಪ್ರಿಲ್ 11, 2020 (www.justkannada.in) ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕೊರೋನಾ ವೈರಸ್ ನಿಯಂತ್ರಣದ ಬಗ್ಗೆ ಕ್ರಮ ವಹಿಸುವ ಬಗ್ಗೆ ಚರ್ಚೆ, ಸಭೆಯಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು,ಶಾಸಕ ಎಂ.ಶ್ರೀನಿವಾಸ್, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಎಸ್ಪಿ ಪರಶುರಾಮ್ , ಸಿಇಓ ಯಾಲಕ್ಕಿಗೌಡ ಭಾಗಿಯಾಗಿದ್ದರು.
ಕೊರೊನೊ ಹಿನ್ನೆಲೆಯಲ್ಲಿ ಪಡಿತರ ವಿತರಣೆ ಸಮಪರ್ಕವಾಗಿ ಮಾಡುವಂತೆ ಸರ್ಕಾರ ಆದೇಶಿಸಿದೆ. ಆದಾಗ್ಯೂ ಜಿಲ್ಲೆಯ ಕೆಲವೆಡೆ ಸರ್ಕಾರದ ಆದೇಶ ಪಾಲನೆ ಆಗುತ್ತಿಲ್ಲ ಎಂಬ ದೂರುಗಳಿವೆ. ತಕ್ಷಣವೆ ಆದೇಶ ಪಾಲನೆಗೆ ಕ್ರಮ ವಹಿಸಬೇಕು ಎಂದು ಉಸ್ತುವಾರಿ ಸಚಿವ ನಾರಾಯಣಗೌಡ
ಆಹಾರ ಇಲಾಖೆ ಉಪನಿರ್ದೇಶಕಿ ಕುಮುದಾ ಅವರಿಗೆ ಸಭೆಯಲ್ಲಿ ಸೂಚಿಸಿದ್ದಾರೆ. ಮತ್ತೆ ಈ ಬಗ್ಗೆ ದೂರುಗಳು ಬಂದಲ್ಲಿ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಪಡಿತರ ಅಂಗಡಿಗಳಲ್ಲಿ ಹೆಚ್ಚು ಹಣ ಪಡೆದರೆ ಅಂತವರ ವಿರುದ್ಧ ಕಾನುನು ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಸಾಕಷ್ಟು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತುರ್ತಾಗಿ ಇರುವ ಸಮಸ್ಯೆ ಬಗೆಹರಿಸಬೇಕು. ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಸಚಿವ ನಾರಾಯಣ ಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ನಾರಾಯಣಗೌಡ –
ಮಾನ್ಯ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿ ನೇಮಕ ಮಾಡಿದ್ದಾರೆ,ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದರು.
ಮಂಡ್ಯ ಜಿಲ್ಲೆಯ ಸೇವೇ ಮಾಡವ ಸೌಭಾಗ್ಯ ಸಿಕ್ಕಿದೆ,ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜನರಿಗೆ ಅಭಿನಂದನೆ ಸಲ್ಲಿಸುತ್ತೆನೆ.
ಕಳೆದ ಎರಡು ತಿಂಗಳಿಂದ ಮಂಡ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಇಲ್ಲಾ ಎಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿತ್ತು.
ನಮ್ಮ ಜಿಲ್ಲೆಯಲ್ಲಿ ಅಧಿಕಾರಿಗಳ ತಂಡ ಮಾಡಿ ಕೊರೋನಾ ನಿಯಂತ್ರಣಕ್ಕೆ ಬೇಕಾಗದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಉತ್ತಮ ರೀತಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಜಿಲ್ಲೆಯಲ್ಲಿ 5 ಕೊರೋನಾ ಪಾಸಿಟಿವ್ ಬಂದಿರುವುದು ದುಃಖಕರ ಸಂಗತಿ ಆಗಿದೆ ಆದರೆ ಭಯಪಡುವ ಅವಶ್ಯಕತೆ ಇಲ್ಲಾ.
ಅಧಿಕಾರಿಗಳಿಗೆ, ವೈದ್ಯರುಗಳಿಗೆ ಸಾರ್ವಜನಿಕರು ಸಹಕರಿಸಬೇಕಿದೆ. ನಮ್ಮ ಜಿಲ್ಲೆಯ ಎಲ್ಲಾ ಸಮುದಾಯಕ್ಕೂ ಮನವಿ ಮಾಡುತ್ತೆನೆ,ಎಲ್ಲರೂ ಸಹ ಅಂತರ ಕಾಯ್ದುಕೊಂಡು ಎಚ್ಚರಿಕೆಯಿಂದ ಇರೋಣ. ನಮ್ಮ ಕುಟುಂಬ, ನಮ್ಮ ತಂದೆ ತಾಯಿರನ್ನ ನಾವೇ ಕಾಪಾಡಿ ಕೊಳ್ಳಬೇಕಾಗುತ್ತದೆ ಎಂದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಜೋತೆ ಸೇರಿ ಹೆಚ್ಚಿನ ರೀತಿ ಜವಾಬ್ದಾರಿ ತಕೊಂಡು ಕೊರೊನಾ ನಿಯಂತ್ರಣ ಮಾಡೋಣಾ.
ಎಲ್ಲಾ ಶಾಸಕರು ಕೈಜೋಡಿಸಿದ್ದಾರೆ, ಎಲ್ಲರೂ ಸಹ ಸಹಕರಿಸಿ ಎಂದು ಮನವಿ ಮಾಡಿಕೊಂಡರು.