ಬೆಂಗಳೂರು,ಡಿ,22,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗೃಹಸಚಿವರ ಜತೆ ಚರ್ಚಿಸಿ ಪ್ರಕರಣದ ತನಿಖೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
ಹಾಗೆಯೇ ಅಲ್ಪಸಂಖ್ಯಾತರ ಹಿತರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಹೀಗಾಗಿ ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರ ಹಿತ ಕಾಯುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು. ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಉದ್ರಿಕ್ತರನ್ನ ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಮಯದಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದರು.
Key words: Mangalore- protest- Two –death-deceased- family-10 lakh -compensation –cm bs yeddyurappa