ಬೆಂಗಳೂರು, ಫೆ.27,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 16 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಉತ್ತರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿದ ಆರೋಪದಡಿ ಸುಹೈಲ್ ಹಾಗೂ ತಂಝೀಲ್ ಸೇರಿ 16 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು.
ಬಳಿಕ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ಜಾಮೀನು ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದೆ. ಸಿಎಎ ವಿರೋಧಿಸಿ ಡಿ.19ರಂದು ಮಂಗಳೂರು ನಗರದಲ್ಲಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆದಿತ್ತು. ಈ ವೇಳೆ ಗೋಲಿಬಾರ್ ನಿಂದ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು.
Key words: Mangalore –violence- case-Bail – 16 accused