ದೇಶವನ್ನು ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಿ ಒಂದು ಗೌರವ ಸ್ಥಾನದಲ್ಲಿ ನಿಲ್ಲಿಸಿದ್ದು ಮನಮೋಹನ್ ಸಿಂಗ್- ಸಿಎಂ ಸಿದ್ದರಾಮಯ್ಯ

ಬೆಳಗಾವಿ.ಡಿಸೆಂಬರ್,27,2024 (www.justkannada.in): ಭಾರತವನ್ನ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಿ, ದೇಶವನ್ನ  ಒಂದು ಗೌರವ ಸ್ಥಾನದಲ್ಲಿ ನಿಲ್ಲಿಸಿದ್ದು ಮಾಜಿ ಪ್ರಧಾನಿ ಮೋಹನ್ ಸಿಂಗ್ ಅವರು. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು  ಸಿಎಂ ಸಿದ್ದರಾಮಯ್ಯ ನುಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಾಧನೆ ಸ್ಮರಿಸಿದ ಸಿಎಂ ಸಿದ್ಧರಾಮಯ್ಯ,  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇವತ್ತಿನ ಪಾಕಿಸ್ತಾನದ ಕುಗ್ರಾಮದಲ್ಲಿ ಜನಿಸಿದವರು. ಅಲ್ಲಿಂದ ದೇಶದ ಖ್ಯಾತ ಅರ್ಥಶಾಸ್ತ್ರಜರಾದರು. ಸಿಂಗ್ ಅವರು  ಪವಾಡದ ರೀತಿ ಬದುಕಿದವರು. ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿ ಬೆಳೆದರು. ಭಾರತವನ್ನ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಿದರು. ಅಲ್ಲದೆ ಆರ್ಥಿಕವಗಿ ಸಾಮಾಜಿಕವಾಗಿ ದೇಶವನ್ನ ಮುಂದೆ ತಂದರು. ಸಿಂಗ್ ರು  ಪ್ರಾಮಾಣಿಕ ಪ್ರಧಾನಿಗಳಲ್ಲಿ ಒಬ್ಬರು . ಮನ್ ಮೋಹನ್ ಸಿಂಗ್ ಅವರ ಕಾರ್ಯದಿಂಧ ದೇಶದ ಆರ್ಥಿಕ ಮುಗ್ಗಟ್ಟು ನಿವಾರಣೆಯಾಯಿತು ಎಂದರು.

2004 ರಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದಾಗ ಸೋನಿಯಾ ಗಾಂಧಿ ಅವರು ಪ್ರಧಾನಿಯಾಗಲು ನಿರಾಕರಿಸಿದರು.  ಈ ವೇಳೆ ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾದರು. ದೇಶದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದರು. ಸಿಂಗ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ  ಮಾಡುತ್ತೇನೆ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  Manmohan Singh, country ,  economic, CM Siddaramaiah