ನವದೆಹಲಿ,ಡಿಸೆಂಬರ್,28,2024 (www.justkannada.in): ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ, ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರದ ಮೇದಾವಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಬೆಳಿಗ್ಗೆ 11.45 ಕ್ಕೆ ನೆರವೇರಲಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇಂದು ಆಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಇಂದು ದೆಹಲಿಯ ಎಐಸಿಸಿ ಕಛೇರಿಯಿಂದ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿದ್ದು, ಸಕಲ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯ ಸಂಪೂರ್ಣ ಪ್ರಕ್ರಿಯೆಯಲ್ಲಿ ಸರ್ಕಾರ ಭಾಗಿಯಾಗಲಿದೆ. ಇನ್ನು ದೇಶದಲ್ಲಿ ಕೇಂದ್ರ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಕೇಂದ್ರ ಸರ್ಕಾರ.
ಬೆಳಗ್ಗೆ 8 ಗಂಟೆಗೆ ದೆಹಲಿಯ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ತರಲಾಗಿತ್ತು.8.30 ರಿಂದ 9.30 ರವರಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಕಾಂಗ್ರೆಸ್ ಕಚೇರಿಯಿಂದ ಪಾರ್ಥಿವ ಶರೀರದ ಅಂತಿಮ ಯಾತ್ರೆ ಶುರುವಾಗಿದ್ದು ನಿಗಮ್ ಬೋದ್ ಘಾಟ್ ವರೆಗೂ ಸಾಗಲಿರುವ ಅಂತಿಮ ಯಾತ್ರೆ ನಡೆಸಲಾಗುತ್ತಿದೆ. ಬಳಿಕ ಸಕಲ ಸರ್ಕಾರಿ, ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
Key words: Former PM, Manmohan Singh, funeral