ನವದೆಹಲಿ,ಡಿಸೆಂಬರ್,27,2024 (www.justkannada.in): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮ ದರ್ಶನ ಪಡೆದರು.
ಮೋತಿಲಾಲ್ ನೆಹರು ಮಾರ್ಗದಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ಇಡಲಾಗಿದ್ದು ಇಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಿ ಪಾರ್ಥೀವ ಶರೀರಕ್ಕೆ ಹೂಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದರು.
ಮನ್ ಮೋಹನ್ ಸಿಂಗ್ ಅವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಸಾಂತ್ವನ ಹೇಳಿದರು.
Key words: Manmohan Singh, passes away, PM Modi, Amit Shah