ಬೆಂಗಳೂರು,ಫೆ,6,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವ ಸಚಿವ ಸಂಪುಟಕ್ಕೆ ಇಂದು 10 ಮಂದಿ ನೂತನ ಸಚಿವರು ಸೇರ್ಪಡೆಯಾಗಿದ್ದು ಇಂದು ಪ್ರಮಾಣವಚನ ಸ್ವೀಕರಿಸಿದರು.
ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಜಭವನದ ಗಾಜಿನಮನೆಯಲ್ಲಿ ನಡೆಯಿತು. ಆದರೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಲವು ಬಿಜೆಪಿ ಮುಖಂಡರು ಗೈರಾಗಿದ್ದರು. ಹೌದು ಪ್ರಬಲ ಸಚಿವಕಾಂಕ್ಷಿಯಾಗಿದ್ದ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್ , ಸಚಿವರಾದ ಕೆ.ಎಸ್ ಈಶ್ವರಪ್ಪ, ಶ್ರೀರಾಮುಲು, ಶಾಸಕ ಅರವಿಂದ ಲಿಂಬಾವಳಿ ಗೈರಾಗಿದ್ದರು.
ಸಚಿವ ಶ್ರೀರಾಮುಲು ಡಿಸಿಎಂ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದರು. ಶ್ರೀರಾಮುಲು ಅವರನ್ನ ಡಿಸಿಎಂ ಮಾಡುವಂತೆ ವಾಲ್ಮಿಕಿ ಸಮುದಾಯದಿಂದ ಒತ್ತಾಯ ಕೇಳಿಬಂದಿತ್ತು. ಆದರೆ ಹೊಸ ಡಿಸಿಎಂ ಹುದ್ದೆ ಸೃಷ್ಠಿಸಲು ಬಿಜೆಪಿ ಹೈಕಮಾಂಡ್ ನಿರಾಕರಿಸಿತ್ತು.
ಇನ್ನು ಇಂದು ನೂತನ ಸಚಿವರಾದ ಎಸ್,ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಡಾ.ಕೆ.ಸುಧಾಕರ್, ಗೋಪಾಲಯ್ಯ, ಶಿವರಾಂಹೆಬ್ಬಾರ್, ಭೈರತಿ ಬಸವರಾಜ್, ಬಿ.ಸಿ ಪಾಟೀಲ್, ನಾರಾಯಣಗೌಡ, ಶ್ರೀಮಂತಪಾಟೀಲ್ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
Key words: Many- BJP leaders – absent – swearing- new minister