ಬೆಂಗಳೂರು,ನವೆಂಬರ್,15,2020(www.justkannada.in) : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ಸಿಎಂ ನಿರ್ಧಾರದಿಂದ ಬೇಸರವಾಗಿದೆ. ಮರಾಠಿಗರಿಗೆ ಬೇಕಾದರೇ ಸವಲತ್ತುಗಳನ್ನ ಒದಗಿಸಲಿ. ಆದರೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೇಡ ಎಂದಿದ್ದಾರೆ.
ಮರಾಠಿಗರು ಗಡಿಯಲ್ಲಿ ಕರಾಳ ದಿನ ಆಚರಿಸುತ್ತಾರೆ. ಆದರೂ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವುದು ಬೇಸರ ತಂದಿದೆ. ಈ ನಿರ್ಧಾರವನ್ನ ಸಿಎಂ ಹಿಂಪಡೆಯದಿದ್ದರೇ ಕನ್ನಡ ಪರ ಸಂಘಟನೆಗಳಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸಾ.ರಾ ಗೋವಿಂದು ಎಚ್ಚರಿಕೆ ನೀಡಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ಸಿಎಂ ಬಿಎಸ್ ವೈ ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಹೇಳಿದ್ದು ಇದಕ್ಕೆ ಸಾಕಷ್ಟು ಅಸಮಾಧಾನ ವ್ಯಕ್ತವಾಗಿದೆ.
Key words: Maratha Development Authority – fierce –protest- sa.ra govindu