ಮೈಸೂರು,ಡಿಸೆಂಬರ್,22,2020(www.justkannada.in): ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಹಾಗೂ ಮರಾಠಿ ಪ್ರಾಧಿಕಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಮತ್ತು ಮರಾಠಿ ಪ್ರಾಧಿಕಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ಜನವರಿ 9 ರಂದು ರಾಜ್ಯದ ಒಂದು ಸಾವಿರ ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ…
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಲಾಭಕ್ಕಾಗಿ ಮರಾಠಿ ಪ್ರಾಧಿಕಾರ ರಚನೆ ಮಾಡಿದ್ದಾರೆ. ಮರಾಠಿ ಪ್ರಾಧಿಕಾರವನ್ನು ಈ ಕೂಡಲೇ ರದ್ದು ಮಾಡಬೇಕು. ಇಲ್ಲದಿದ್ದರೆ ಬರುವ ಜನವರಿ 9 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು. ಜನವರಿ 9 ರಂದು ರಾಜ್ಯದ ಒಂದು ಸಾವಿರ ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Key words: Marathi development-corporation- cancel- protest- vatal nagaraj- mysore