ಮೈಸೂರು,ಡಿಸೆಂಬರ್,17,2020(www.justkannada.in) : ಪರಿಷತ್ ಒಳಗೆ ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದವರಿಗೆ, ದಂಡ ಹಾಕಬೇಕು. ಸಭಾಪತಿಗಳೇ ಈ ನಿರ್ಣಯ ಕೈಗೊಳ್ಳಲಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಗದ್ದಲ ವಿಚಾರ ಸಂಬಂಧಿಸಿದಂತೆ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶವ್ಯಕ್ತಪಡಿಸಿದ್ದಾರೆ. ನಿಯಮ ಜನರಿಗೂ, ಜನಪ್ರತಿನಿಧಿಗಳು ಎಲ್ಲರಿಗು ಒಂದೇ. ನಿಯಮ ಪಾಲಿಸದ ಜನಪ್ರತಿನಿಧಿಗಳಿಗೆ ದಂಡ ವಿಧಿಸಿ ಎಂದಿದ್ದಾರೆ.
ಜನ ಸಾಮಾನ್ಯರು ಈ ವಿಚಾರದಲ್ಲಿ ಎತ್ತಿರುವ ಧ್ವನಿ ನ್ಯಾಯಸಮ್ಮತ. ನಾನು ಆ ಪಕ್ಷ, ಈ ಪಕ್ಷ ಎಂದು ಮಾತಾನಾಡುತ್ತಿಲ್ಲ. ಎಲ್ಲರಿಗೂ ಒಂದೇ ನಿಯಮ ಅನ್ವಯ ಆಗಲಿ ಎಂದಷ್ಟೇ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಮೇಲ್ಮನೆ ರದ್ದತಿ ಮಾಡುವ ಚರ್ಚೆಯಿಲ್ಲ
ಮೇಲ್ಮನೆ ರದ್ದತಿ ಮಾಡುವಂತಹ ಯಾವುದೇ ಚರ್ಚೆಗಳು ಇಲ್ಲ. ಆಗಿರುವ ತಪ್ಪಿನ ಬಗ್ಗೆ ಸಭಾಪತಿಗಳು ಕ್ರಮ ಕೈಗೊಳ್ಳುತ್ತಾರೆ. ಈ ಬಗ್ಗೆ ಹೆಚ್ಚಿನ ಚರ್ಚೆಯು ಬೇಡ ಎಂದು ತಿಳಿಸಿದ್ದಾರೆ.
key words : Masked-inside-council-those-who-do-not-maintain-social- distance-Penalties-Minister-S.T.Somashekhar