ಬೆಂಗಳೂರು,ಜ,3,2020(www.justkannada.in): ವೇತನ ಹೆಚ್ಚಳ ಮತ್ತು ಪ್ರೋತ್ಸಹ ಧನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್ ವರಗೆ ಆಶಾಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ವೇತನ 12 ಸಾವಿರಕ್ಕೆ ಹೆಚ್ಚಳ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 15 ತಿಂಗಳಿನಿಂದ ಬಾಕಿ ಇರೋ ಪ್ರೋತ್ಸಹ ಧನವನ್ನ ನೀಡಬೇಕು. ಆರೋಗ್ಯ ವಿಮೆ ನೀಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ಆಶಾಕಾರ್ಯಕರ್ತೆಯರು ಭಾಗಿಯಾಗಿದ್ದಾರೆ. ಹಲವು ದಿನಗಳ ಹಿಂದೆಯೇ ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ. ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ ನಗರದ ಮೆಜೆಸ್ಟಿಕ್, ಕೆಆರ್ ವೃತ್ತ, ಆನಂದ್ ರಾವ್ ಸರ್ಕಲ್, ಶೇಷಾದ್ರಿಪುರಂ, ಕಾರ್ಪೊರೇಷನ್, ಕೆಜಿ ರಸ್ತೆ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
Key words: massive protest – Asha activists – Bangalore –various demands-Warning – Government.