ಬೆಂಗಳೂರು,ನವೆಂಬರ್,26,2020(www.justkannada.in): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲೂ ಕಾರ್ಮಿಕ ಸಂಘಟನೆಗಳು ಜಿಟಿಜಿಟಿ ಮಳೆ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿವೆ.
ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಎಐಟಿಯುಸಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ರ್ಯಾಲಿ ಪ್ರಾರಂಭವಾಗಿದ್ದು ಪ್ರೀಡಂಪಾರ್ಕ್ ವರೆಗೆ ಸಾಗಲಿದೆ.
ಇನ್ನು ಆಟೋ, ಓಲಾ ಊಬರ್ ಕ್ಯಾಬ್ ಚಾಲಕರೂ ಸಹ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆ ಮೆಜೆಸ್ಟಿಕ್ ಸುತ್ತಾಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟುವ ಸ್ಥಿತಿ ಉಂಟಾಗಿದೆ.
Key words: Massive- protest rally –Bengaluru-AITUC-rain