ಬೆಂಗಳೂರು, ಡಿಸೆಂಬರ್ 01, 2021 (www.justkannada.in): 2015 ರಲ್ಲಿ ‘ವಿಂಡ್ಸ್ ಆಫ್ ಸಂಸಾರ’ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿಗೆ ಭಾಜನರಾಗಿದ್ದ ಸಂಗೀತ ನಿರ್ದೇಶಕ ಮತ್ತು ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರು ಮತ್ತೊಮ್ಮೆ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ನಾಮನಿರ್ದೇಶನಗಳನ್ನು ರೆಕಾರ್ಡಿಂಗ್ ಅಕಾಡೆಮಿಯ ಸಿಇಒ ಹಾರ್ವೆ ಮೇಸನ್ ಜೂನಿಯರ್ ಅವರು ಘೋಷಿಸಿದ್ದಾರೆ. ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರ ಆದರ್ಶಗಳನ್ನು ಆಧರಿಸಿ, ‘ವಿಂಡ್ಸ್ ಆಫ್ ಸಂಸಾರ’ ರೂಪುಗೊಂಡಿತ್ತು.
ಅಮೇರಿಕಾದ ಬಿಲ್‌ಬೋರ್ಡ್ ನ್ಯೂ ಏಜ್ ಆಲ್ಬಮ್‌ಗಳ ಪಟ್ಟಿಯಲ್ಲಿ ಇದು ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿತು.ಈ ಹೆಗ್ಗಳಿಕೆ ಪಡೆದ ಭಾರತದ ಮೊದಲ ಸಂಗೀತ ನಿರ್ದೇಶಕ ರಿಕಿ ಕೇಜ್.
ಪ್ರಪಂಚದಾದ್ಯಂತದ ಕಲಾವಿದರನ್ನು ಒಳಗೊಂಡಿರುವ ಪ್ರಸ್ತುತ ಗ್ರ್ಯಾಮಿ ನಾಮನಿರ್ದೇಶಿತ ಸಂಗೀತ ಆಲ್ಬಂ ‘ಡಿವೈನ್ ಟೈಡ್ಸ್’ ನಮ್ಮ ನೆಲದ ನಿಸರ್ಗದ ವೈಭವವನ್ನು ಕಟ್ಟಿಕೊಟ್ಟಿದೆ.