ರನ್ಯಾರಾವ್ ಗೆ ಜಮೀನು ಮಂಜೂರು ವಿಚಾರ: ಸ್ಪಷ್ಟನೆ ಕೊಟ್ಟ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2025 (www.justkannada.in):  ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಅವರಿಗೆ ಜಮೀನು ಮಂಜೂರು ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ರನ್ಯಾರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Key words: Ranya Rao, project, BJP government, Minister M.B Patil