ಬೆಂಗಳೂರು,ಅ,10,2019(www.justkannada.in): ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಈ ನಡುವೆ ಅಧಿವೇಶನದ ಕಲಾಪದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ರಾಜ್ಯ ಬಿಜೆಪಿ ಸರ್ಕಾರದ ನಡೆಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಧ್ಯಮಗಳಿಗೆ ಕಡಿವಾಣ ಹಾಕುವ ಅವಶ್ಯಕತೆ ಇರಲಿಲ್ಲ. ಆದ್ರೆ ಈ ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿದ ತಪ್ಪನ್ನು ಮುಂದುವರೆಸುವುದಕ್ಕೆ ಯಾವುದೇ ಸಮಸ್ಯೆ ಆಗಬಾರದೆಂದು ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲ ಆಗಿವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೇಲಸ ಮಾಡಬೇಕಾಗಿರುವ ಹಿನ್ನೆಲೆ.ಇಂದು ನಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಬೀದಿಗಿಳಿದು ಪ್ರತಿಭಟನೆ ಮಾಡಿದರೂ ಎಚ್ಚೆತ್ತು ಕೊಳ್ಳದಿದ್ರೆ. ಮೂರು ದಿನಗಳ ಅಧಿವೇಶನದ ಕಲಾಪದಲ್ಲೂ ನಮ್ಮ ಹೋರಾಟ ಮುಂದುವರೆಯುತ್ತೆ. ಮೂರು ತಿಂಗಳಲ್ಲಿ ಸರ್ಕಾರದಿಂದ ಆದ ವೈಫಲ್ಯವನ್ನು.ಸದನದಲ್ಲಿ ಎಳೆ ಎಳೆಯಾಗಿ ತೆರೆದಿಡುವ ಕೆಲಸ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
Key words: media –session-Former CM -HD Kumaraswamy –bjp governament