ಬೆಂಗಳೂರು,ನವೆಂಬರ್,14,2021(www.justkannada.in): ರಾಜ್ಯದಲ್ಲಿ ಸದ್ಯಕ್ಕೆ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿರುವುದು ನಿಜ. ಆದರೆ ಪೋಷಕರ ಹಿತದೃಷ್ಟಿಯಿಂದ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಶೇ. 89 ರಷ್ಟು ಜನರಿಗೆ ಕೊರೊನಾ ಲಸಿಕೆ ಮೊದಲ ಡೋಸ್ ನೀಡಲಾಗಿದೆ. ಶೇ. 48 ರಷ್ಟು ಜನರಿಗೆ 2 ನೇ ಡೋಸ್ ಲಸಿಕೆ ನೀಡಲಾಗಿದೆ. ಮುಂದಿನ ವಾರದಿಂದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು.
Key words: medical education-fee – no hike-Minister -Dr K Sudhakar