ನವದೆಹಲಿ,ಜುಲೈ,31,2021(www.justkannada.in): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿವಾಸಕ್ಕೆ ಭೇಟಿ ನೀಡಿ ಅವರ ಜತೆ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಕ್ಕೆ ಜಿಎಸ್ ಟಿ 11,400 ಕೋಟಿ ಬಾಕಿ ಬರಬೇಕಿದೆ. ಇದನ್ನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಮನವಿ ಮಾಡಿದ್ದೇನೆ. ಪ್ರತಿ ತಿಂಗಳು ಕಂತಿನಲ್ಲಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ ಎಂದು ತಿಳಿಸಿದರು.
ಹಾಗೆಯೇ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿಯಾಗಿ ಚರ್ಚಿಸಿದ್ದೇನೆ. ಮುಂದಿನ ತಿಂಗಳಿಂದ 1.5 ಲಕ್ಷ ಡೋಸ್ ಕೊರೋನ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿದ್ಧ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ,ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತಿತ್ತರ ಸಚಿವರನ್ನ ಭೇಟಿಯಾಗಿದ್ದರು.
Key words: Meet – Union Finance Minister -Nirmala Sitharaman- CM Basavaraj Bommai – release – GST- dues.