ಬೆಂಗಳೂರು,ಜ,17,2020(www.justkannada.in): ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಇಂದು ನಡೆದಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಕೆಎಂಎಫ್ ಆಡಳಿತ ಮಂಡಳಿ ಸಭೆ ಬಳಿಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಹಾಲಿನ ಜತೆಗೆ ಹಾಲಿನ ಉತ್ಪನ್ನಗಳ ದರ ಏರಿಕೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಒಪ್ಪಿಗೆ ಪಡೆದು ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದ 14 ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರವನ್ನು ಹೆಚ್ಚಳ ಕುರಿತಂತೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಪ್ರತಿ ಲೀಟರ್ ಗೆ ರೂ.2ರಿಂದ 3 ರೂಪಾಯಿ ಹೆಚ್ಚಳದ ಬೇಡಿಕೆಯನ್ನು ಇಟ್ಟಿವೆ. ಈಬಗ್ಗೆ ನಾಳಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಿನ್ನೆ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದರು.
ಇನ್ನು ಹಾಲಿನ ದರ ಹೆಚ್ಚಳಕ್ಕೆ ಸಿಎಂ ಬಿಎಸ್ ವೈ ಒಪ್ಪಿಗೆ ಸೂಚಿಸಿದರೆ ಪ್ರತಿ ಲೀಟರ್ ಹಾಲಿನ ದರ 2ರಿಂದ ಮೂರು ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.
Key words: meeting –increase- milk price- Final decision – KMF President- Balachandra Jarakiholi.