ಬೆಂಗಳೂರು,ಜೂ,25,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಕೊರೋನಾ ತಡೆ ಮತ್ತು ಲಾಕ್ ಡೌನ್ ಕುರಿತು ಚರ್ಚಿಸಲು ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಹಾಗೂ ನಾಳೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ಲಾಕ್ ಡೌನ್ ಕುರಿತು ಚರ್ಚಿಸುತ್ತೇನೆ. ಇಂದು ಮಧ್ಯಾಹ್ನ 1 ಗಂಟೆಗೆ ಅಧಿಕಾರಿಗಳು ಮತ್ತು ಸಚಿವರ ಜತೆ ಸಭೆ ನಡೆಸುತ್ತೇನೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಪೂರ್ಣ ಲಾಕ್ ಡೌನ್ ಮಾಡಿಲ್ಲ. ಕೆಲವು ಏರಿಯಾಗಳಷ್ಟೇ ಸೀಲ್ ಡೌನ್ ಮಾಡಲಾಗಿದ್ದು, ಅದು ಮುಂದುವರೆಯಲಿದೆ. ನಾಳೆ ಬೆಂಗಳೂರಿನ ಎಲ್ಲಾ ಪಕ್ಷದ ಶಾಸಕರು, ಸಚಿವರು ಜೊತೆ ಸಭೆ ನಡೆಸುತ್ತೇನೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ಸರ್ವ ಪಕ್ಷ ಶಾಸಕರ ಸಭೆ ನಡೆಯಲಿದೆ ಎಂದು ತಿಳಿಸಿದರು.
ದಿನೇ ದಿನೇ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಒಂದು ವೇಳೆ ಲಾಕ್ ಡೌನ್ ಬೇಡ ಅಂದರೇ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಎಲ್ಲರೂ ದೈಹಿಕ ಅಂತರ ಕಾಪಾಡಿಕೊಂಡು ಎಚ್ಚರ ವಹಿಸಿ. ಬೆಂಗಳೂರಿನಲ್ಲಿ ಲಾಕ್ ಡೌನ್ ಬೇಡ ಅಂದರೇ ಸಾಮಾಜಿಕ ಅಂತರ ಪಾಲಿಸಿ. ಒಂದು ವೇಳೆ ಜನ ಬುದ್ಧಿ ಕಲಿಯದಿದ್ದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಾರ್ನಿಂಗ್ ನೀಡಿದ್ದಾರೆ.
Key words: Meeting –Lockdown-hardest step -Warning -CM BS Yeddyurappa.