ಬೆಂಗಳೂರು,ಜನವರಿ,14,2022(www.justkannada.in): ಮೇಕೆದಾಟು ಯೋಜನೆ ಬೇಕು. ಆದರೆ ಅಣೆಕಟ್ಟು ನಿರ್ಮಿಸುವುದು ಬೇಡ ಎಂದು ನರ್ಮದಾ ಬಚಾವ್ ಆಂದೋಲನದ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.
ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೇಧಾ ಪಾಟ್ಕರ್ ಅವರು, ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 1200 ಹೆಕ್ಟೇರ್ ಅರಣ್ಯ ಭೂಮಿಯೊಂದಿಗೆ ಆ ಭಾಗದಲ್ಲಿ ವಾಸಿಸುವ ಪ್ರಾಣಿ ಸಂಕುಲವೂ ನಾಶವಾಗಲಿದೆ. ಕಾಡು ನಾಶವಾದರೆ ಸಾವಿರಾರು ಜನರ ಬದುಕಿಗೆ ಗಂಡಾಂತರ ಒದಗಲಿದೆ. ಪರಿಸರದ ಮೇಲೆಯೂ ಇವೆಲ್ಲವೂ ಪರಿಣಾಮ ಬೀರಲಿದೆ. ಅಣೆಕಟ್ಟು ಕಟ್ಟುವ ಬದಲು ಕೆರೆ, ಕುಂಟೆಗಳನ್ನು ಸಂರಕ್ಷಿಸಿ, ಜೀವಜಲ ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ. ನಾವೆಲ್ಲರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ವಿರೋಧಿಸಬೇಕು. ಅಣೆಕಟ್ಟು ನಿರ್ಮಿಸುವುದರಿಂದ ಕೆಲ ರಾಜಕಾರಿಣಿಗಳಿಗೆ, ಗುತ್ತಿಗೆದಾರರಿಗೆ ಅನುಕೂಲವಾಗುತ್ತದೆ. ಜನರಿಗೆ ಇದರಿಂದ ಯಾವ ಅನುಕೂಲವೂ ಇಲ್ಲ. ಉತ್ತಮ ಪರಿಸರ ಉಳಿದರೆ ಸಾವಿರಾರು ಜನರಿಗೆ ಅನುಕೂಲವಾಗುತ್ತದೆ ಎಂದರು.
Key words: mekedatu –plan . no dam –construction-Medha Patkar