ಬೆಂಗಳೂರು,ಮಾರ್ಚ್,25,2022(www.justkannada.in): ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ಧ ನಿರ್ಣಯಕ್ಕೆ ಕರ್ನಾಟಕದ ಉಭಯ ಸದನದಲ್ಲಿ ಖಂಡನಾ ನಿರ್ಣಯವನ್ನ ಮಂಡಿಸಿ ಒಮ್ಮತದಿಂದ ಅಂಗೀಕಾರ ಮಾಡಲಾಗಿದೆ.
ರಾಜ್ಯದಲ್ಲಿ ಜಾರಿ ಮಾಡಲು ಉದ್ಧೇಶಿಸಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಯೋಜನೆ ವಿರುದ್ಧ ನಿರ್ಣಯ ಮಂಡಿಸಿದೆ. ಈ ನಿರ್ಣಯದ ವಿರುದ್ಧ ನಿನ್ನೆ ರಾಜ್ಯದ ವಿಧಾನಸಭೆಯಲ್ಲಿ ಖಂಡನಾ ನಿರ್ಣಯವನ್ನ ಮಂಡಿಸಿ ಒಮ್ಮತದಿಂದ ಅಂಗೀಕರಿಸಲಾಗಿತ್ತು.
ಇದೀಗ ವಿಧಾನ ಪರಿಷತ್ ನಲ್ಲಿ ಮೇಕೆದಾಟು ಯೋಜನೆ ವಿರುದ್ದ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ದ ನಿರ್ಣಯಕ್ಕೆ ಖಂಡನಾ ನಿರ್ಣಯ ಮಂಡನೆ ಮಾಡಿ ಒಮ್ಮತದಿಂದ ಅಂಗೀಕಾರ ಮಾಡಲಾಗಿದೆ. ಕಾನೂನು ಸಚಿವ ಮಾಧುಸ್ವಾಮಿ ಖಂಡನಾ ಮಂಡನೆ ಮಾಡಿದರು. ಸರ್ಕಾರ ಖಂಡನಾ ನಿರ್ಣಯವನ್ನ ಕಾಂಗ್ರೆಸ್ ಸ್ವಾಗತಿಸಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ಸರ್ಕಾರದ ನಿರ್ಣಯ ಸರ್ವಾನುಮತದಿಂದ ಕಾಂಗ್ರೆಸ್ ಒಪ್ಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
Key words: mekedatu plan-Tamil Nadu -against –condemnation- decision.