ಬೆಂಗಳೂರು,ಫೆಬ್ರವರಿ,10,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಜಾರಿಗೆ ಮುಂದಾಗಿರುವ ಸುಗ್ರೀವಾಜ್ಞೆಯನ್ನು ಇದೀಗ ಮತ್ತೆ ರಾಜ್ಯಪಾಲರಿಗೆ ರವಾನೆ ಮಾಡಿದೆ.
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ನೀಡಿ ಅಂಕಿತಕ್ಕೆ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು.
ಇದೀಗ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಅಗತ್ಯತೆ ಬಗ್ಗೆ ವಿವರಣೆ ನೀಡಿ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನ ಅಂಕಿತಕ್ಕೆ ರವಾನಿಸಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಾರೋ ಅಥವಾ ಮತ್ತೆ ವಾಪಾಸ್ಸು ಕಳುಹಿಸುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
Key words: Micro Finance, Ordinance, again, Governor