ಮೈಸೂರು,ಜೂನ್,5,2023(www.justkannada.in): ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡುವ ಕೆಎಂಎಫ್ ನಿರ್ಧಾರಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಬೆನಲ್ಲೇ ಆದೇಶವನ್ನ ವಾಪಸ್ ಪಡೆಯಲಾಗಿದೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತ ಆದೇಶವನ್ನ ವಾಪಸ್ ಪಡೆದಿದೆ. ಈ ಕುರಿತು ಕೆಎಂಎಫ್ ಅಧಿಕೃತ ಆದೇಶ ಹೊರಡಿಸಿದೆ.
ರೈತರಿಗೆ ನೀಡುವ ಪ್ರೋತ್ಸಾಹ ಧನ ಕಡಿತ ಮಾಡಲು ಕೆಎಂಎಫ್ ನಿರ್ಧಾರ ಮಾಡಿತ್ತು. ಆದರೆ ಈ ನಿರ್ಧಾರವನ್ನ ಸರ್ಕಾರ ಸೂಕ್ಷ್ಮವಾಗಿ ಗಮನಿಸಿದ್ದು. ಈ ಹಿಂದಿನ ದರವನ್ನೇ ಮುಂದುವರೆಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಆಗಾಗಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ಹೈನುಗಾರಿಕೆ ಹಿತೈದೃಷ್ಟಿಯಿಂದ ಈ ಆದೇಶವನ್ನ ವಾಪಸ್ ಪಡೆಯುತ್ತಿದ್ದೇವೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದಾರೆ.
Key words: Milk- subsidy- reduction -order – farmers- withdrawn- order