ನವದೆಹಲಿ,ಫೆಬ್ರವರಿ,1,2021(www.justkannada.in): ಎಲ್ಲಾ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯವಾಗಲಿದೆ. ಕಾರ್ಮಿಕರ ಮಾಹಿತಿ ಸಂಗ್ರಹಕ್ಕೆ ಹೊಸ ಪೋರ್ಟಲ್ ಆರಂಭ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಇಂದು ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಮಧ್ಯಮ ಹಾಗೂ ಸಣ್ಣ ಕೈಗಾರಿಕೆ ಕ್ಷೇತ್ರಕ್ಕೆ 15,700 ಸಾವಿರ ಕೋಟಿ ನೀಡಲಾಗುತ್ತದೆ. ಮಹಿಳೆಯರು 24 ಗಂಟೆಗಳ ಕಾಲ ಕೆಲಸ ಮಾಡಲು ಅವಕಾಶ ನೀಡಲಾಗುತ್ತದೆ. ಎಲ್ಲಾ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯವಾಗಲಿದೆ. ಕಟ್ಟಡ ಕಾರ್ಮಿಕರು,ಅಸಂಘಟಿತ ವಲಯದ ಕಾರ್ಮಿಕರ ಮಾಹಿತಿ ಸಂಗ್ರಹಕ್ಕೆ ಹೊಸ ಪೋರ್ಟಲ್ ಆರಂಭ ಮಾಡಲಾಗುತ್ತೆ ಎಂದರು.
ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಅಸಂಘಟಿತ ಕಾರ್ಮಿಕ ವಲಯಕ್ಕೂ ಪಿಂಚಣಿವ್ಯವಸ್ಥೆ ಜಾರಿಗೊಳಿಸಲಾಗುವುದು. ನ್ಯಾಷನಲ್ ಡೈಡ್ರೋಜನ್ ಎನರ್ಜಿ ಮಿಷನ್ ಗೆ ಚಾಲನೆ. 2022 ಕ್ಕೆ ನ್ಯಾಷನಲ್ ಹೈಡ್ರೋಜನ್ ಎನರ್ಜಿ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
Key words: Minimum Wage Act -All Sector –Workers- New Portal -Data Collection.