ಬೆಂಗಳೂರು,ಡಿಸೆಂಬರ್,9,2022(www.justkannada.in): ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್ ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ ನಾರಾಯಣ್ ಅವರು ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್ ಮಹತ್ತರ ಪಾತ್ರ ವಹಿಸಲಿದೆ ಎಂದರು.
ಈ ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.
ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್, ಔಷಧಗಳ ಆವಿಷ್ಕಾರ, ಮೆಟೀರಿಯಲ್ ಸೈನ್ಸ್ ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ನುಡಿದರು.
ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್ ರಾವ್, ಸೆಲ್ ಲಿಂಕ್ ಕಂಪನಿಯ ಏಷ್ಯಾ-ಪೆಸಿಫಿಕ್ ಮುಖ್ಯಸ್ಥೆ ಟೊಮೋಕೊ ಬೈಲುಂಡ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್ ಪೊದ್ದಾರ್ ಉಪಸ್ಥಿತರಿದ್ದರು.
Key words: Minister- Ashwath Narayan- inauguration- India- first -3D Bioprinting Center – Excellence.
ENGLISH SUMMARY..
IISc partners with CELLiNK
Centre of Excellence for 3D bioprinting launched
Bengaluru: The new Centre of Excellence’ (CoE) for 3D bioprinting, first of its kind in the subcontinent, established in partnership between IISC and leading global BioConvergence (BICO) company CELLiNK was inaugurated on Friday.
Dr CN Ashwath Narayan, Minister for IT/BT and Higher Education, launched the CoE housed in the Centre of Biosystems Science and Engineering (BSSE) at IISC.
Speaking on the occasion, Narayan said, the 3D bio printing technology which enables the printing of human tissues and organs would facilitate faster and more accurate models for drug development.
The CoE which focuses on working around the health care of heart, bone, cartilage and cance will house several state of the art 3D bio printers. This also serves as a hub for several research initiatives and training activities related to emerging field of bio printing technology, he explained.
IISC Director Professor Govindan Rangarajan said, “IISC and CELLiNK will work together to conduct workshops aimed at providing the necessary skills to utilise 3D bioprinting and to enable reap the benefits of 3D cell culture. The two will undertake and advise on research projects related to tissue engineering, drug discovery, material science and regenerative/ personalised medicine.”
“The CoE excellence will provide access to 3D bioprinting systems and enable researchers to accelerate their work across critical applications. Eventually this would lead to improved health outcomes” remarked Tomoko Bylund, Head, CELLiNK (Asia Pacific).
Professor Vishal Rao Dean, Health Care Global, pointed out, 3D bioprinting facilitates to print tissue and organ models which help in drug research and developing potential treatments. He added, this will have impact on human health by promoting drug discovery, testing and regenerating tissues for therapies.
Following the inauguration a brief demonstration of the technology was provided.