ಎಸ್ .ಟಿ ನಿಗಮದ ಹಗರಣ: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.

ಬೆಂಗಳೂರು,ಜೂನ್,6,2024 (www.justkannada.in):   ವಾಲ್ಮಿಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವರ ತಲೆದಂಡವಾಗಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿ.ನಾಗೇಂದ್ರ ಯುವಜನ ಸೇವೆ ಮತ್ತು ಕ್ರೀಡೆ , ಪರಿಶಿಷ್ಟ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು.

ವಾಲ್ಮಿಕಿ ಅಭಿವೃದ್ದಿ ನಿಗಮದಲ್ಲಿಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇಂದು ರಾಜ್ಯಪಾಲರನ್ನ ಭೇಟಿಯಾಗಿ ಬಿ.ನಾಗೇಂದ್ರ ವಿರುದ್ದ ದೂರು ಸಲ್ಲಿಸಿತ್ತು.

Key words: ST Corporation, scandal, minister, B. Nagendra, resigns