ಧಾರವಾಡ, ಆಗಸ್ಟ್, 18, 2020(www.justkannada.in): ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು ಎಂದು ಇದುವರೆಗೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಹೇಳಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ ಕಾರಿದರು.
ದಾವಣಗೆರೆಯ ಕತ್ತಲಗೆರೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಬಹುದೊಡ್ಡ ರಾಜಕೀಯ ಪಿತೂರಿ ಇದೆ. ಸ್ವ-ಪಕ್ಷದ ದಲಿತ ಶಾಸಕನ ರಕ್ಷಣೆಗೆ ಕಾಂಗ್ರೆಸ್ ನಾಯಕರು ನಿಲ್ಲುತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ತಮ್ಮ ಶಾಸಕರನ್ನು ಕಾಪಾಡಿಕೊಳ್ಳಲು ಆಗಿಲ್ಲ. ಆರೋಪಿಗಳನ್ನು ಆಮಾಯಕರು ಎಂಬ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಲಭೆಯು ರಾಜಕೀಯ ಪ್ರೇರಿತ : ಠಾಣೆಗೆ, ಶಾಸಕರ ಮನೆಗೆ ಬೆಂಕಿಬಿಟ್ಟವರು ಅಮಾಯಕರಾ? ಅಖಂಡ ಶ್ರೀನಿವಾಸರ ಮನೆ ಮೇಲೆ ನಡೆದ ದಾಳಿಪೂರ್ವ ನಿಯೋಜಿತ ಸಂಚು. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ಈ ಗಲಭೆ ಹಿಂದಿರುವ ಸಂಘಟನೆಗಳನ್ನು ಸರಕಾರ ನಿಷೇಧ ಮಾಡಬೇಕು. ಸಂಘಟನೆಗಳ ನಿಷೇಧದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಸರ್ಕಾರ ಸುಭದ್ರವಾಗಿದೆ. ದುಷ್ಟಶಕ್ತಿಗಳನ್ನು ಸರ್ಕಾರ ಹೆಡೆಮುರಿ ಕಟ್ಟುತ್ತದೆ ಎಂದು ತಿಳಿಸಿದರು.
Key words: minister- BC Patil-bangalore- roit-case- congress- leader