ಶಾಂತಿಯುತವಾಗಿ ಹೊಸ ವರ್ಷಾಚರಣೆ: ಯಾವುದೇ  ಅಹಿತಕರ ಘಟನೆ ನಡೆದಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಜನವರಿ,1,2025 (www.justkannada.in):  ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಶಾಂತಿಯುತವಾಗಿ ಹೊಸ ವರ್ಷಾಚರಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಿನ್ನೆ ರಾತ್ರಿ ಹೊಸ ವರ್ಷದ ಆಚರಣೆಯಲ್ಲಿ ಜನ ಭಾಗವಹಿಸಿದ್ದರು. ಸಂಭ್ರಮಾಚರಣೆಯ ವೇಳೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪೊಲೀಸರು ಉತ್ತಮ ಭದ್ರತೆ ಒದಗಿಸಿದ್ದಾರೆ. ನಾನು ಎಲ್ಲಿಯೂ ಭೇಟಿ ನೀಡಿಲ್ಲ ಎಲ್ಲರೂ ಶಾಂತಿಯಿಂದ ಹೊಸ ವರ್ಷ ಆಚರಣೆ ಮಾಡಿದ್ದಾರೆ. ರಾಜ್ಯದ ಯುವಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇನ್ನು  ಡಿಕೆ ಸುರೇಶ್  ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಕ್ರಿಯಿಸಿದ ಪರಮೇಶ್ವರ್, ಈ ಸಂಬಂಧ ಡಿಕೆ ಸುರೇಶ್ ಅವರು ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ಮಾಡುತ್ತಾರೆ. ಸರ್ಕಾರ ಇದರಲ್ಲಿ ಭಾಗಿಯಾಗಲ್ಲ ಎಂದರು.

Key words: Peaceful, New Year, celebration, Home Minister, Dr. G. Parameshwar