ಬೆಂಗಳೂರು,ಏಪ್ರಿಲ್,26,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ತಡೆಗಾಗಿ 15 ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಕೊರೋನಾ ತಡೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ. ರಾಜ್ಯದಲ್ಲಿ ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಲಾಕ್ ಡೌನ್ ಮಾಡಲು ತಜ್ಞರು ಸಲಹೆ ನೀಡಿದ್ದಾರೆ. ಅದ್ದರಿಂದ ಕೊರೋನಾ ಸೋಂಕಿನ ನಿಯಂತ್ರಣ ಬರಬೇಕಾದ್ರೆ.. ರಾಜ್ಯದಲ್ಲಿ 15 ದಿನ ಸಂಪೂರ್ಣ ಲಾಕ್ ಡೌನ್ ಅಗತ್ಯವಿದೆ ಹೀಗಾಗಿ ಲಾಕ್ ಡೌನ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಇನ್ನು ಕೊರೋನಾ ಸೋಂಕು ಡಬಲ್ ತ್ರಿಬಲ್ ಆಗುತ್ತಿದೆ. ಲಾಕ್ ಡೌನ್ ಮಾಡದಿದ್ದರೇ ಆರೋಗ್ಯ ನಿರ್ವಹಣೆ ಕಷ್ಟ ಎಂದು ಸಚಿವ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Minister-Dr.k. Sudhakar – cabinet meeting – lock down -corona