ಕಾಂಗ್ರೆಸ್ ನಲ್ಲಿ ಈಗ ಉಳಿದಿರೋದು ಪಪ್ಪುಗಳಷ್ಟೇ ಎಂದ ಸಚಿವ ಈಶ್ವರಪ್ಪ

ಬೆಂಗಳೂರು, ನವೆಂಬರ್ 30, 2021 (www.justkannada.in): ಕಾಂಗ್ರೆಸ್ ನಲ್ಲಿ ಈಗ ನಾಯಕರು ಉಳಿದಿಲ್ಲ ಬರೀ ಪಪ್ಪುಗಳಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಸ್ಥಾನದಿಂದ ಇಳಿದು ಈಗ ಪ್ರಾದೇಶಿಕ ಪಕ್ಷವಾಗಿದೆ. ಆ ಪಕ್ಷಕ್ಕೆ ನಾಯಕರಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

70 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ದಲಿತರನ್ನು ಕೇವಲ ಮತಕ್ಕಾಗಿ ಬಳಸಿಕೊಂಡಿದೆ. ಅವರ ಉದ್ಧಾರ ಮಾಡಿಲ್ಲ. ಕಾಂಗ್ರೆಸ್ ಹಲವು ರಾಜ್ಯದಲ್ಲಿ ಸೋತು ಏಕೆ ಅವನತಿಯತ್ತ ಸಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ನಾಲ್ಕು ಬಾರಿ ಬಿಜೆಪಿ ಅಧಿಕಾರ ನಡೆಸಿದೆ. ಇದುವರೆಗೆ ಪಕ್ಷ ಎದುರಿಸಿರುವ ವಿಧಾನಸಭೆ ಚುನಾವಣೆಗಳಲ್ಲಿ ಪೂರ್ಣ ಬಹುಮತ ಬಂದಿಲ್ಲ. ಆದರೆ ಈ ಬಾರಿ ಅದು ಕೂಡ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.