ಬೆಂಗಳೂರು,ಜನವರಿ,7,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ 60% ಕಮಿಷನ್ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಹೆಚ್.ಡಿ ಕುಮಾರಸ್ವಾಮಿ ಮಾಡಿರುವ ಕಮಿಷನ್ ಆರೋಪ ಸಾಬೀತು ಮಾಡಲಿ. ಹೆಚ್ ಡಿಕೆ ಸಾಕ್ಷಿ ಆಧಾರ ಇಟ್ಟುಕೊಂಡು ಮಾತಾಡಬೇಕು ಸುಮ್ಮನೆ ಆರೋಪ ಮಾಡುವುದು ಬೇಡ ಎಂದು ಕಿಡಿಕಾರಿದರು.
ಗುತ್ತಿಗೆದಾರರ 38 ಸಾವಿರ ಕೋಟಿ ಬಾಕಿ ಇದೆ ಅಂತಾರೆ. ಎಲ್ಲಿದೆ ಬಾಕಿ ಹೇಳಿ. ಬಿಜೆಪಿ 10 ಸಾವಿರ ಕೋಟಿ ರೂ ಮಂಜೂರು ಮಾಡಿತ್ತು. ಸುಮ್ಮನೆ ಮಂಜೂರು ಮಾಡಿ ಬಿಜೆಪಿ ಹೊರಟು ಹೋಯ್ತು. ಈಗ ಆರೋಪ ಮಾಡಿದ್ರೆ ಹೇಗೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಪ್ರಶ್ನಿಸಿದರು.
Key words: 60% commission, allegation, Minister, H.C. Mahadevappa, HDK