ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ

ನವದೆಹಲಿ,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ,  ಯಾರನ್ನ ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನ ನಿರ್ವಹಿಸುತ್ತೇವೆ. ಸಚಿವ  ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಇಬ್ಬರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ.  ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: no competition, KPCC president, Minister, Ishwar Khandre