ರಾಜ್ಯದ ಎಲ್ಲಾ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್: ನಾಳೆ ಚಾಲನೆ-ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು, ಅಕ್ಟೋಬರ್,2,2024 (www.justkannada.in): ಕುಮಾರ ಪರ್ವತ ಚಾರಣ ಪಥಕ್ಕೆ ಜ.26, 27ರಂದು ಸಾವಿರಾರು ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ ಚಾರಣ ಪಥಗಳಿಗೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ  ಸಚಿವ ಈಶ್ವರ್ ಬಿ ಖಂಡ್ರೆ ಪ್ರಕಟಿಸಿದ್ದಾರೆ.

70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರಿನ ಕಬ್ಬನ್ ಉದ್ಯಾನದಿಂದ ಲಾಲ್ ಬಾಗ್ ಸಸ್ಯಕಾಶಿಯವರೆಗೆ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಕಾಂತಾರಾ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ  ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತಿತರರು ಪಾಲ್ಗೊಂಡಿದ್ದರು.

ಈ ವೇಳೆ  ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯದ ಎಲ್ಲಾ ಚಾರಣ ಪಥಗಳಿಗೂ ಒಂದೇ ಅಂತರ್ಜಾಲ ತಾಣದಲ್ಲಿ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು, ನಾಳೆ ಮಧ್ಯಾಹ್ನ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ವೆಬ್ ಸೈಟ್ ಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

Key words: Minister, Ishwar Khandre, 70th Wildlife Week, Kabban park