ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎರಡು ವಿಚಾರಗಳು ಅಪ್ರಸ್ತುತ- ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು, ಏಪ್ರಿಲ್‌ 19,2025 (www.justkannada.in):  ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಎರಡು ವಿಚಾರಗಳು ಸದ್ಯ ಅಪ್ರಸ್ತುತ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ.ಶಿವಕುಮಾರ್ ರವರೇ ಮುಂದುವರೆಯಲ್ಲಿದ್ದಾರೆ.  ಅದು ನಮ್ಮ ಮಟ್ಟದಲ್ಲಿನ ಚರ್ಚೆ ಅಲ್ಲ ಏನೇ ಇದ್ದರೂ ಹೈಕಮಾಂಡ್ ಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿದೆ ಎಂದು ಹೇಳಿದರು.

ದಲಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಮಾಧ್ಯಮಗಳು ಸೃಷ್ಟಿ ಮಾಡಿವೆ. ಈಗಾಗಲೇ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರೇ ಇದ್ದು ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ. ಎಲ್ಲಾ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ ,ಆರ್ಥಿಕ ಸಮಾನತೆ ಕೊಡುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಯಾಗಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಧರ್ಮ ಸಿಂಗ್ ನಂತರ ಅತ್ಯಂತ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಗಬೇಕು ಎಂದು ನಾನೇ ಹೇಳಿದ್ದೆ.  ತದನಂತರ ಮೊದಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗ ನಮ್ಮ ಪರಮೇಶ್ವರ್ ರವರು ಕೆಪಿಸಿಸಿ ಅಧ್ಯಕ್ಷರಿದ್ದಾಗ ಆಕಸ್ಮಿಕವಾಗಿ ಸೋತರು ಕೂಡ ಅವರಿಗೆ ಉಪ ಮುಖ್ಯಮಂತ್ರಿ ಮಾಡಬೇಕೆಂದು ನಾನೇ ಒತ್ತಾಯ ಮಾಡಿದ್ದೆ. ದಲಿತರಲ್ಲಿ ಯಾರಿಗಾದರು ಕೊಡಬೇಕೆಂದು ಹೇಳಿದ್ದೆ ಆದರೆ ಅದರ ಸಮಯ ಇನ್ನೂ ಬಂದಿಲ್ಲ ಎಂಬುದು ಕಾಣತಿದೆ. ಏಕೆಂದರೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇರುವುದರಿಂದ ನಮ್ಮ ಹೈಕಮಾಂಡ್ ಯಾವ ಸಮಯದಲ್ಲಿ ಏನು ನಿರ್ಧಾರ ಮಾಡಬೇಕು ಮಾಡಲಿದೆ ಎಂದರು.

Key words: change, CM, KPCC President, irrelevant issues , Minister, K.H. Muniyappa.