ಬೆಂಗಳೂರು,ಜೂ,10,2020(www.justkannada.in): ಜೂನ್ 19 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ನಯವಾಗಿ ಕಾಲೆಳೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್, ‘ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಬ್ಬರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಗೆ ಟಿಕೆಟ್ ನೀಡಲಾಗಿದೆ.
Key words: minister- K.Sudhakar-rajyasabha-election-HD Devegowda- Mallikarjuna khrage