ಬೆಂಗಳೂರು,ಏಪ್ರಿಲ್,18,2025 (www.justkannada.in): ಜಾತಿಜನಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಪ್ಪುವ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಜಾತಿ ಜನಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿ ಗಣತಿ ಬಗ್ಗೆ ಯಾರಿಗೂ ತೊಂದರೆ ಆಗಲ್ಲ ಲಿಂಗಾಯಿತ, ಒಕ್ಕಲಿಗ ಎಲ್ಲಾ ಸಮುದಾಯದವರು ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ ಎಂದರು.
ಜಾತಿ ಗಣತಿ ವರದಿ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
Key words: Caste Report, Minister, KH Muniyappa