ಬೆಳಗಾವಿ,ಡಿಸೆಂಬರ್,19,2024 (www.justkannada.in): ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ತಮ್ಮ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ತನ್ನದೇ ಲೆಟರ್ ಹೆಡ್ ಮೇಲೆ ದೂರು ಬರೆದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ಟದ್ದಾರೆ. ಎಂಎಲ್ ಸಿ ಸಿಟಿ ರವಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸುತ್ತಿದ್ದು ಕೆಲವೇ ಹೊತ್ತಿನಲ್ಲಿ ಎಫ್ ಐಆರ್ ದಾಖಲಾಗಲಿದೆ.
ಇಂದು ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರೂ ಕೂಡ ಪ್ರತಿಭಟನೆಗಿಳಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್ ಸಿ ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Key words: Minister, Lakshmi Hebbalkar, complaint, C.T. Ravi