ಬೆಳಗಾವಿ ಡಿಸೆಂಬರ್, 16,2024 (www.justkannada.in) ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
ವಿಧಾನಪರಿಷತ್ ನಲ್ಲಿ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.
ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮಧು ಬಂಗಾರಪ್ಪ, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಸ್ಪಷ್ಟಪಡಿಸಿದ್ದಾರೆ.
Key words: CBSE, curriculum, implemented, Minister, Madhu Bangarappa