ಮಂಡ್ಯ,ಜೂ,20,2020(www.justkannada.in): ಜೂನ್ 25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು ಈ ನಡುವೆ ಪರೀಕ್ಷೆ ಬರೆಯಲಿರುವ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು.
ಇಂದು ಕೆಆರ್ ಪೇಟೆ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ, ವಿದ್ಯಾರ್ಥಿಗಳಿಗೆ ಸಚಿವ ನಾರಾಯಣಗೌಡ ಅವರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.
ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ 9 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 3 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆ ಬರೆಯಲಿರುವ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ನೀಡುವಂತೆ ಸಚಿವ ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Key words: Minister – narayanagwoda- students – SSLC -examination – distribution – mask.