ರಾಜ್ಯದಲ್ಲಿ ಅನಧಿಕೃತವಾಗಿ ಪಾಕ್ ಪ್ರಜೆಗಳು ನೆಲೆಸಿದ್ದರೇ ಕ್ರಮ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್​,25,2025 (www.justkannada.in):  ಪಹಲ್ಗಾಮ್​ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ​ ಪ್ರಜೆಗಳು ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಅನಧಿಕೃತವಾಗಿ ಪಾಕ್ ಪ್ರಜೆಗಳು ನೆಲೆಸಿದ್ದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಾಜ್ಯದಲ್ಲಿ ಸ್ಲೀಪರ್ ಸೆಲ್​​ಗಳ ಪತ್ತೆ ಕಾರ್ಯವೂ ನಡೆಯುತ್ತಿದೆ. ಸ್ಲೀಪರ್​​​​ ಸೆಲ್​​​​​ಗಳು ಪತ್ತೆಯಾದರೆ NIAಗೆ ಮಾಹಿತಿ ನೀಡುತ್ತೇವೆ. ಅನಧಿಕೃತವಾಗಿ ಪಾಕಿಸ್ತಾನ​ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು.  ಎಂದರು.

ದೇಶದ ಭದ್ರತೆ ವಿಚಾರವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳಬಹುದು. ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಮಾತನಾಡಲ್ಲ ಎಂದು ಪರಮೇಶ್ವರ್ ತಿಳಿಸಿದರು.

Key words: Action, against, Pakistani, nationals, residing, illegally , state, Minister, Parameshwar