ಬೆಂಗಳೂರು,ಫೆಬ್ರವರಿ,12,2025 (www.justkannada.in): ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಈ ಬಗ್ಗೆ ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಠಾಣೆ ಮೇಲೆ ಕಲ್ಲೆಸೆದರೇ ಸುಮ್ಮನೆ ಇರಲು ಆಗಲ್ಲ. ಆರೋಪಿಗಳ ಬಂಧನಕ್ಕೆ ಸೂಚನೆ ನೀಡಿದ್ದೇನೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲಾಗಿದೆ. ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಶಾಸಕ ಸಂಗಮೇಶ್ ಪುತ್ರನಿಂದ ಮಹಿಳಾ ಅಧಿಕಾರಿ ಬೆದರಿಕೆ ಆರೋಪ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಬಸವೇಶ್ ಪಾತ್ರವಿದ್ದರೇ ಪೊಲೀಸರು ಎಫ್ ಐಆರ್ ದಾಖಲಿಸಲಿದ್ದಾರೆ. ತುರ್ತು ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಿದ್ದೇನೆ ಎಂದರು.
Key words: Udayagiri case, considered, seriously, Minister, Parameshwar