ಗೇಮಿಂಗ್ ಆ್ಯಪ್ ಆನ್ ​ಲೈನ್​ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಶೀಘ್ರ ಹೊಸ ಮಾನದಂಡ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏಪ್ರಿಲ್​,9,2025 (www.justkannada.in):  ಆನ್ ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಶೀಘ್ರವೇ ಹೊಸ ಮಾನದಂಡ ತರುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಆನ್ ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ಈ ಆ್ಯಪ್​ ಗಳಿಗೆ ಕಡಿವಾಣ ಹಾಕಲು  ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು. ಈ ಸಂಬಧ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆದಿದೆ. ಇವುಗಳಿಂದ ದುರಾಸೆಗೆ ಬೀಳದಂತೆ ನಮ್ಮ ಜನರನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆ ನಡೆಸಿದ್ದೇವೆ  ಎಂದು ತಿಳಿಸಿದರು.

ಗೇಮಿಂಗ್ ಆ್ಯಪ್ ​ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರಕ್ಕೆ ಕಷ್ಟದ ಕೆಲಸ. ಕೇವಲ ನಮ್ಮ ದೇಶ ಅಷ್ಟೇ ಅಲ್ಲ, ಬೇರೆ ದೇಶದ ಗೇಮಿಂಗ್ ಆ್ಯಪ್​ ಗಳು ಇವೆ. ಕಾನೂನು ಬಾಹಿರವಾಗಿರುವುದನ್ನು ಮೊದಲು ನಿಷೇಧ ಮಾಡಬೇಕು. ಲೀಗಲ್ ಆಗಿ ಇದ್ದರೆ ನಿಯಂತ್ರಣ ಹೇಗೆ ಮಾಡಬೇಕೆಂದು ಚರ್ಚೆ  ಮಾಡಲಾಗುತ್ತದೆ ಎಂದರು

Key words: online betting, gaming apps, curb, New norms, Minister, Priyank Kharge