2020ರಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿದಾಗ ಜನರ ತೊಂದರೆ ತಿಳಿಯಲಿಲ್ಲವೇ? ಬಿಜೆಪಿಗೆ ಸಚಿವ ರಾಮಲಿಂಗರೆಡ್ಡಿ ಟಾಂಗ್

 

ಬೆಂಗಳೂರು,ಜನವರಿ,3,2025 (www.justkannada.in): ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್. ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿದ್ದರು.  ಆಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ? ಎಂದು  ಕುಟುಕಿದರು.

ಬೇರೆ ರಾಜ್ಯಗಳಿಗೆ  ಹೋಲಿಕೆ ಮಾಡಿ ನೋಡಿದರೇ ನಮ್ಮ ರಾಜ್ಯದಲ್ಲೇ ಪ್ರಯಾಣದರ ಕಡಿಮೆ ಇದೆ. ಈಗಲಾದರೂ ಬಿಜೆಪಿಯವರು ಕೇವಲ ಸುಳ್ಳು ಹೇಳಿ ತನ್ನ ಫೇಕ್ ವಾಟ್ಸಪ್ ಸೋಷಿಯಲ್ ಮೀಡಿಯಾ ಯೂನಿವರ್ಸಿಟಿಯಿಂದ ಜನರ ದಾರಿ ತಪ್ಪಿಸುವುದನ್ನು ಬಿಡಬೇಕು ಎಂದು ಕಿಡಿಕಾರಿದರು.

Key words: bus fares, increased, Minister Ramalingareddy, BJP