ಮೈಸೂರು,ಡಿಸೆಂಬರ್,14,2020(www.justkannada.in): ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಮೈಸೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದರು.
ಮುಷ್ಕರ ಮುಂದುವರಿದಿದ್ದರೂ ಬಸ್ ಸಂಚಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಖುದ್ದು ಬಸ್ ಗಳ ಬಳಿ ತೆರಳಿದ ಸಚಿವ ಎಸ್.ಟಿ ಸೋಮಶೇಖರ್, ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಪ್ರಯಾಣಿಕರನ್ನು ಮಾತನಾಡಿಸಿ, ಅಭಿಪ್ರಾಯ ಸಂಗ್ರಹಿಸಿದರು. ಕಳೆದ ಎರಡು-ಮೂರು ದಿನಗಳಿಂದ ಆದ ತೊಂದರೆಗೆ ಬೇಸರ ವ್ಯಕ್ತಪಡಿಸಿದರು.
ಪಟ್ಟು ಸಾಧಿಸುವುದು ಸರಿಯಲ್ಲ
ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಮಾತನಾಡಲು ಸಿದ್ಧರಿದ್ದರೂ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಯಾರದ್ದೋ ಮಾತು ಕೇಳಿಕೊಂಡು ಪಟ್ಟು ಸಾಧಿಸುತ್ತಿರುವುದು ಸರಿಯಲ್ಲ ಎಂದು ಪರ್ತಕರ್ತರ ಪ್ರಶ್ನೆಗೆ ಸಚಿವರಾದ ಸೋಮಶೇಖರ್ ಉತ್ತರಿಸಿದರು.
ಲಾಕ್ ಡೌನ್ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿಗಳಿಗೆ ಸರ್ಕಾರವೇ ವೇತನ ಕೊಟ್ಟಿದೆ. ಅಲ್ಲದೆ, ಈ ಸಂದರ್ಭದಲ್ಲಿ ಕೆಲ ಸಮಯ ಬಸ್ ಸಂಚಾರವಿರಲಿಲ್ಲ. ಹೀಗಿದ್ದರೂ ಸರ್ಕಾರ ಉತ್ತಮವಾಗಿ ನೋಡಿಕೊಂಡಿದೆ. ಅಲ್ಲದೆ, ವೇತನದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದೆ. ಈಗಲೂ ಸಹ ಕೊರೋನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದೆ. ಸ್ವಲ್ಪ ಸಮಯದ ಬಳಿಕ ಎಲ್ಲವೂ ಸರಿಹೊಂದಿದ ಮೇಲೆ ಕ್ರಮ ಬೇಡಿಕೆಗಳನ್ನು ಇಡಬಹುದಿತ್ತು ಎಂದು ಸಚಿವ ಎಸ್.ಟಿ ಸೋಮಶೇಖರ್ ಅಭಿಪ್ರಾಯ ತಿಳಿಸಿದರು.
ಕೋಡಿಹಳ್ಳಿ ಚಂದ್ರಶೇಖರ್ ರಾಜಕೀಯಕ್ಕೆ ಸಚಿವರ ಕಿಡಿ
ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತಪರ ಹೋರಾಟವನ್ನು ಮಾಡಿಕೊಂಡಿರಲಿ. ಅದುಬಿಟ್ಟು ಎಲ್ಲ ಕಡೆ ಮೂಗುತೂರಿಸಬಾರದು. ಅವರು ಯಾವ ನಾಟಕವಾಡಿದರೂ ಜನಕ್ಕೆ ಅರ್ಥವಾಗುತ್ತದೆ. ಅವರು ತಮ್ಮ ಡ್ರಾಮಾಗಳನ್ನು ಬಿಟ್ಟು 9 ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುವುದಕ್ಕೆ ಅಭಿನಂದನೆ ಸೂಚಿಸಬೇಕಿತ್ತು. ಅದು ಬಿಟ್ಟು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಹೋರಾಟ ಮಾಡುವಂತೆ ಮಾಡುವುದು ಸರಿಯೇ? ಎಲ್ಲ ಕಡೆಯೂ ಕೋಡಿಹಳ್ಳಿ ಚಂದ್ರಶೇಖರ್ ಅವರು ಕಾಂಟ್ರ್ಯಾಕ್ಟ್ ತೆಗೆದುಕೊಂಡಿದ್ದಾರೆಯೇ? ಅವರು ರೈತರ ಪರ ಹೋರಾಟ ಮಾಡಲಿ, ಇಂತಹ ರಾಜಕೀಯ ಬೇಡ ಎಂದು ಕಟುವಾಗಿ ನುಡಿದರು.
ಕೋಡಿಹಳ್ಳಿ ಅವರು ಏನೇ ಪಿತೂರಿ ಮಾಡಿದರೂ ಸಹ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕಿತ್ತು. ಇಂತಹ ಕೊರೋನಾ ಸಂದಿಗ್ದ ಸ್ಥಿತಿಯಲ್ಲಿ ಹೋರಾಟ ಬೇಕಿರಲಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಹೋರಾಟ ನಡೆಸುವುದು ಎಷ್ಟು ಸರಿ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
English summary….
Minister S.T. Somashekar visits KSRTC bus stand in Mysuru, inspects
Mysuru, Dec. 14, 2020 (www.justkannada.in): Following the transport department employees’ protest that was going on for the last three days, Mysuru District In-charge Minister S.T. Somashekar made a surprise visit to the KSRTC Bus Stand in Mysuru and inspected the condition.
Bus services resumed on Monday amidst protests, following which the Minister visited the bus stand and collected information from the officials and checked the situation. He also spoke with a few commuters and also expressed his dissatisfaction with the inconvenience caused for the passengers in the last three days.
Keywords: Minister S.T. Somashekar/ KSRTC Bus Stand, Mysuru/ Surprise visit
Key words: Minister S T Somashekhar -visits -mysore- KSRTC- bus stand