ಎರಡೆರಡು ಹುದ್ದೆ, ಜವಾಬ್ದಾರಿ ನಿರ್ವಹಣೆ ಕಷ್ಟ: ಬದಲಾವಣೆ ಆಗಬೇಕೆಂಬುದು ಎಲ್ಲರ ಅಭಿಪ್ರಾಯ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜನವರಿ,1,2025 (www.justkannada.in):  ಕೆಪಿಸಿಸಿ ಅಧ್ಯಕ್ಷ ಸ್ಥಾನ  ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹಹೊಳಿ, ಕೆಪಿಸಿಸಿಯ ಈಗಿರುವ ಅಧ್ಯಕ್ಷರನ್ನೇ ಮುಂದುವರಿಸಬೇಕೇ ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇದು ನಮ್ಮ ಹಂತದಲ್ಲಿ ಆಗುವಂತಹದ್ದಲ್ಲ.  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ. ಎರಡೆರಡು ಹುದ್ದೆಯಲ್ಲಿದ್ದರೆ ತಮ್ಮ ಜವಾಬ್ದಾರಿ ನಿರ್ವಹಿಸುವುದು ಕಷ್ಟವಾಗುತ್ತದೆ. ಹೀಗಾಗಿ ಬದಲಾವಣೆ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದರು.

ಬೆಳಗಾವಿ ಜಿಲ್ಲಾಧ್ಯಕ್ಷರ ನೇಮಕ ಕುರಿತು ಪ್ರತಿಕ್ರಿಯಿಸಿದ  ಸತೀಶ್ ಜಾರಕಿಹೊಳಿ, ಈ ಬಗ್ಗೆ ಎಲ್ಲರೂ ಸೇರಿ ಚರ್ಚೆ ಮಾಡಿ ಒಬ್ಬರ ಹೆಸರು ಅಂತಿಮಮಾಡಿ ವರಿಷ್ಠರಿಗೆ ಕೊಟ್ಟಿದ್ದೇವೆ. ಪಕ್ಷದ ಕೆಲಸಕ್ಕೆ ಯಾರು ಹೆಚ್ಚು ಸಮಯ ಕೊಡುತ್ತಾರೋ ಅಂತಹ ವ್ಯಕ್ತಿಯ ಹೆಸರನ್ನು ಕೊಡಲಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದರು.

Key words: KPCC, President, Change,Minister, Satish Jarkiholi