ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಸರಿಯಲ್ಲ-ಕೊರೋನಾ ಅಂಕಿ-ಅಂಶಗಳ ಬಗ್ಗೆ ಟೀಕಿಸಿದ ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ಟಾಂಗ್…

ಬೆಂಗಳೂರು,ಮಾರ್ಚ್,27,2021(www.justkannada.in): ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶ ಇಲ್ಲ ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್,  ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ ಎಂದು ಕಿಡಿಕಾರಿದ್ದಾರೆ.

ಹಾಗೆಯೇ ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.Minister -Sudhakar –former cm- Siddaramaiah –criticizing- corona number

ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320. ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಟ್ವಿಟ್ಟರ್ ನಲ್ಲಿ ಸಿದ್ಧರಾಮಯ್ಯ ಸರ್ಕಾರವನ್ನ ಟೀಕಿಸಿದ್ದರು

 

Key words: Minister -Sudhakar –former cm- Siddaramaiah –criticizing- corona number