ತುಮಕೂರು,ಜನವರಿ,9,2021(www.justkannada.in): ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಅನ್ನ ಅಡ್ಡಗಟ್ಟಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಲಕನನ್ನ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲೋನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ ಮತ್ತು ನಿರ್ವಾಹಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಾಲಾ ವಿದ್ಯಾರ್ಥಿಗಳು ಕೈ ನೀಡಿ ಸ್ಟಾಪ್ ಕೇಳಿದರೂ ಸಹ ಕೆಎಸ್ಆರ್ಟಿಸಿ ಬಸ್ ಚಾಲಕ ಬಸ್ ನಿಲ್ಲಿಸದೇ ಹಾಗೆಯೇ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಅದೇ ಮಾರ್ಗವಾಗಿ ಬೆಂಗಳೂರುನಿಂದ ಮಧುಗಿರಿ ಕಡೆ ಬರುತ್ತಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ಬಸ್ ನಿಲ್ಲಿಸಿದ್ದಾರೆ. ನಂತರ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ತರಾಟೆ ತೆಗೆದುಕೊಂಡು ಕಡ್ಡಾಯವಾಗಿ ವಿದ್ಯಾರ್ಥಿಗಳಿಗೆ ಬಸ್ ಸ್ಟಾಪ್ ನೀಡಲು ಸೂಚಿಸಿದರು.
Key words: minister-Suresh Kumar-class- KSRTC bus- driver –student-stop