ಮೈಸೂರು, ಡಿ.24,2019(www.justkannada.in): ಚಾಮುಂಡಿಬೆಟ್ಟದ ನಂದಿ ಪ್ರತಿಮೆಗೆ ಸಾಗುವ ರಸ್ತೆ ಮಧ್ಯೆ ಎಡಬಿಡದೆ ಸುರಿದ ಮಳೆಯಿಂದಾಗಿ ಉಂಟಾಗಿದ್ದ ರಸ್ತೆ ಕುಸಿತದ ದುರಸ್ತಿ ಮಾಡಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ತ್ವರಿತವಾಗಿ ಕೆಲಸ ಮುಗಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಚಿವ ವಿ.ಸೋಮಣ್ಣ ಸೂಚನೆ ನೀಡಿದರು. ಜತೆಗೆ ಕಾಮಗಾರಿ 49 ಲಕ್ಷ ರೂಗಳ ಅಂದಾಜು ವೆಚ್ಚದಲ್ಲಿ ನಡೆಯುತ್ತಿದ್ದು, ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Key words: Minister -V Somanna – check- road- repair -works – Chamundi hills